ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಹಾಸನ ಜಿಲ್ಲೆಯ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಕಾಂಗ್ರೆಸ್ ಕಚೇರಿಯ ಭಾರತ ಜೋಡೋ ಭವನದಲ್ಲಿ ಗುರುವಾರ ಸೇರ್ಪಡೆಗೊಂಡರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಮಾಜಿ ಎಂಎಲ್ಸಿ ಗೋಪಾಲಸ್ವಾಮಿ, ಮಾಜಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿವಿ ಶ್ರೀನಿವಾಸ್, ಮಾಜಿ ಶಾಸಕ ಪುಟ್ಟೇಗೌಡ ಮತ್ತಿತರರು ಉಪಸ್ಥಿತರಿದ್ದರು.
ಚನ್ನರಾಯಪಟ್ಟಣದ ಜೆಡಿಎಸ್ ಮುಖಂಡ ಹಾಗೂ ಹಾಸನ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಎ.ಇ ಚಂದ್ರಶೇಖರ್, ಬಿಜೆಪಿಯ ಸಿ.ವಿ ರಾಜಪ್ಪ, ಜೆಡಿಎಸ್ ನ ಹೆಚ್.ಎಸ್. ಶ್ರೀಕಂಠಯ್ಯ, ಚನ್ನರಾಯಪಟ್ಟಣ ನಗರ ಯೋಜನಾ ಪ್ರಾಧಿಕಾರ ಮಾಜಿ ಅಧ್ಯಕ್ಷ ಎ.ಸಿ. ಆನಂದ್ ಕುಮಾರ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ಶ್ರೀಮತಿ ಶ್ವೇತ, ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಹೆಚ್.ಎನ್. ಲವಣ ಮತ್ತಿತರ ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಂಡರು.