ಛಲವಾದಿ ನಾರಾಯಣಸ್ವಾಮಿಗೆ ಕಲಬುರಗಿಯ ಚಿತ್ತಾಪುರದಲ್ಲಿ ದಿಗ್ಭಂದನ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೇ 24 ರಂದು ಕಲಬುರಗಿ ಚಲೋ ನಡೆಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿ ಚಲೋಗೆ ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. ಕಳೆದೆರಡು ದಿನಗಳ ಹಿಂದೆ ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿ ದಿಗ್ಭಂದನ ಹಾಕಲಾಗಿತ್ತು. ಸಚಿವ ಪ್ರಿಯಾಂಕ್ ಖರ್ಗೆಗೆ ಛಲವಾದಿ ನಾರಾಯಣಸ್ವಾಮಿ ನಾಯಿ ಎಂದು ಹೋಲಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದರು.
ಈ ವೇಳೆ ಛಲವಾದಿ ನಾರಾಯಣಸ್ವಾಮಿ ಅವರನ್ನು ಸರ್ಕ್ಯೂಟ್ ಹೌಸ್ನಲ್ಲಿ ಕೂಡಿ ಹಾಕಲಾಗಿತ್ತು. ಸತತ ನಾಲ್ಕೈದು ಘಂಟೆಗಳ ಕಾಲ ಛಲವಾದಿ ನಾರಾಯಣಸ್ವಾಮಿ ಅವರನ್ನು ಪ್ರಿಯಾಂಕ್ ಖರ್ಗೆ ಬೆಂಬಲಿಗರು ಕೂಡಿ ಹಾಕಿದ್ದರು. ಅದೇ ವಿಚಾರವನ್ನೀಗ ಮುಂದಿಟ್ಟುಕೊಂಡು ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ನಾಯಕರು ಒತ್ತಾಯಿಸುತ್ತಿದ್ದಾರೆ.
ಹೀಗಾಗಿ ಮೇ 24 ರಂದು ಕಲಬುರಗಿ ಚಲೋ ನಡೆಸಲು ಬಿಜೆಪಿ ನಾಯಕರು ಪ್ಲಾನ್ ಮಾಡಿದ್ದಾರೆ. ಎನ್.ರವಿಕುಮಾರ್ ನೇತೃತ್ವದಲ್ಲಿ ಕಲಬುರಗಿ ನಡೆಸಲು ನಿರ್ಧರಿಸಲಾಗಿದೆ.