ಆನೇಕಲ್: ಸೂಟ್ ಕೇಸ್ ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ.
ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಹತ್ತಿರ ಸೂಟ್ಕೇಸ್ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. 10 ವರ್ಷದ ಬಾಲಕಿ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಬಾಲಕಿ ಸಾವನ್ನಪ್ಪಿದ ನಂತರ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.