ಚಿತ್ರದುರ್ಗ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಬಸ್ ಡಿಕ್ಕಿಯಾಗಿ, ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಾಡನಾಯಕನಹಳ್ಳಿ ಸಮೀಪದ ರಾ.ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ.
ಗದಗ ಜಿಲ್ಲೆ ಮುಂಡರಗಿ ಮೂಲದ ನಿಂಗಪ್ಪ ಮೃತ ಬಸ್ ಚಾಲಕ. ಓವರ್ ಟೆಕ್ ಮಾಡಲು ಹೋಗಿ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿಯಾದ ಪರಿಣಾಮ ಘಟನೆಯಲ್ಲಿ ನಾಲ್ಕು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.