ಬೆಂಗಳೂರು: ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ ಡಿವೈಡರ್ ಗೆ ಬಸ್ ಡಿಕ್ಕಿಯಾಗಿರುವ ಘಟನೆ ನಡೆದಿದೆ.
ಸಿಗ್ನಲ್ ನಲ್ಲಿ ಟೆಂಪೋ ಅಡ್ಡ ಬಂದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ (KSRTC) ಬಸ್ ಬ್ರೇಕ್ ಫೇಲ್ (Brake Failure) ಆಗಿದೆ. ಪರಿಣಾಮ ಡಿವೈಡರ್ಗೆ ಡಿಕ್ಕಿ ಹೊಡೆದಿದೆ.
ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನ ಬ್ರೇಕ್ ಫೇಲ್ ಆಗಿದೆ. ಬಸ್ ನಲ್ಲಿ ಸುಮಾರು 42 ಜನ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ.