ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಪಘಾತವೊಂದು ಸಂಭವಿಸಿದೆ. ಕೊಪ್ಪ ತಾಲೂಕಿನ ಹಿರೀಕೆರೆ ಬಳಿ ಮಳೆಯಿಂದಾಗಿ ನಿಯಂತ್ರಣ ತಪ್ಪಿದ ಕೆಸ್ಆರ್ಟಿಸಿ ಬಸ್ ಮುಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಾಗಳಾಗಿದ್ದು, ಬಸ್ಸಿನಲ್ಲಿದ್ದ 10 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಾಗಳಾಗಿವೆ. ಸದ್ಯ ಗಾಯಾಳುಗಳನ್ನು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೃಂಗೇರಿಯಿಂದ ತರೀಕೆರೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಇದಾಗಿದ್ದು, ಬಸ್ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬ ಪುಡಿಪುಡಿಯಾಗಿದೆ. ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.