ಬೆಂಗಳೂರು: ತಿರುವಿನಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಸಾರಿಗೆ ಬಸ್, ಬೈಕ್ ಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ಮಗುಚಿದ ಪರಿಣಾಮ ಬೈಕ್ ನಲ್ಲಿದ್ದ ಸಬ್ ಇನ್ಸ್ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು-ಕನಕಪುರ ಮುಖ್ಯ ರಸ್ತೆಯ ಕಗ್ಗಲಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಬ್ ಇನ್ಸ್ಪೆಕ್ಟರ್ ನಾಗರಾಜು ಸಾವನ್ನಪ್ಪಿರುವ ದುರ್ದೈವಿ ಎನ್ನಲಾಗಿದೆ.
ಅಲ್ಲದೇ, ಬಸ್ ನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. ರಸ್ತೆ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ಎದುರಿಗೆ ಬರುತ್ತಿದ್ದ ಬೈಕ್ಗೆ ಬಸ್ ಡಿಕ್ಕಿ ಹೊಡೆದಿದೆ. ನಂತರ ಬಸ್ ಹಳ್ಳಕ್ಕೆ ಮಗುಚಿ ಬಿದ್ದಿದೆ. ಹೀಗಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.