ರಾಮನಗರ : ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಿ ಅವರ ಸಮಸ್ಯೆಗಳನ್ನು ಬಗೆಹರಿಸಿ, ಇಲ್ಲದಿದ್ದರೆ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಸಾರಿಗೆ ನೌಕರರ ಮುಷ್ಕರ ವಿಚಾರವಾಗಿ ರಾಮನಗರದಲ್ಲಿ ಮಾತನಾಡಿದ ವಾಟಾಳ್, ಇದು ಸಾರಿಗೆ ನೌಕರರ ಬಹಳ ವರ್ಷದ ಬೇಡಿಕೆಯಾಗಿದೆ. ಅವರ ಬೇಡಿಕೆ ಸರಿಯಾಗಿದ್ದು, ಯಾವ ಸರ್ಕಾರವೂ ಅವರ ಸಮಸ್ಯೆಯನ್ನು ಆಲಿಸಲಿಲ್ಲ. ಹೀಗಾಗಿ ಅವರ ಹಳೆಯ ಸಂಬಳವನ್ನು ಕೊಟ್ಟುಬಿಡಿ. ಅವರ 36 ತಿಂಗಳ ಸಂಬಳ ಯಾಕೆ ಬಾಕಿ ಇಟ್ಟಿಕೊಂಡಿದ್ದೀರಿ? ಬಾಕಿ ಇಟ್ಟುಕೊಂಡರೆ ನೌಕರರ ಜೀವನ ಹೇಗೆ ನಡೆಯಬೇಕು ಎಂದು ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಹಾಗೂ ರಾಮಲಿಂಗಾರೆಡ್ಡಿ, ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕು. ಸಾರಿಗೆ ನೌಕರರ ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ರಾಜ್ಯ ಸರ್ಕಾರ ಕೂಡಲೇ ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ಅವರ ಜೊತೆ ಸೇರಿ ನಾವು ಹೋರಾಟ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.