ಚಿಕ್ಕಬಳ್ಳಾಪುರ: ಕಾರಿನ ಟೈಯರ್ ಬ್ಲಾಸ್ಟ್ ಆಗಿ ಸುಮಾರು 10 ಬಾರಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಈ ಘಟನೆ ಜಿಲ್ಲೆಯ ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ಲಕೊಂಡದಲ್ಲಿ ನಡೆದಿದೆ. ಘಟನೆಯಲ್ಲಿ ಸಮತ ಸೈನಿಕ ದಳದ ರಾಜ್ಯಧ್ಯಕ್ಷ ಚನ್ನಕೃಷ್ಣಪ್ಪ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚನ್ನಕೃಷ್ಣಪ್ಪ ಅವರ ಮಗ ತಂದೆ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದು, ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.