ಉಡುಪಿ: ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಲವೆಡೆ ಜನ-ಜೀವನ ಅಸ್ತವ್ಯಸ್ಥವಾಗುತ್ತಿದೆ.
ಇದೀಗ ಉಡುಪಿಯಲ್ಲಿ ಸುರಿದ ಭಾರಿ ಮಳೆಗೆ, ಚಾಲಕನ ನಿಯಂತ್ರಣ ತಪ್ಪಿ ಕಾರು ಉರುಳಿ ಬಿದ್ದಿದೆ. ಆಗುಂಬೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಕಾರು ಇದಾಗಿದ್ದು, 6 ನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ಸದ್ಯ ಕಾರಿನಲ್ಲಿ ಸಿಲುಕಿಕೊಂಡಿದ್ದ ತಾಯಿ- ಮಗುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.