ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCIL) ಕಂಪನಿಯಲ್ಲಿ ಮ್ಯಾನೇಜ್ ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯುಟಿವ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿ ಒಟ್ಟು 147 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೇ 24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. cotcorp.org.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಯಾವ ಹುದ್ದೆಗಳು ಎಷ್ಟು ಖಾಲಿ?
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್- 125
ಜೂನಿಯರ್ ಅಸಿಸ್ಟೆಂಟ್ (ಲ್ಯಾಬ್)- 02
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್)- 10
ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್)- 10
ವಿದ್ಯಾರ್ಹತೆ ಏನು?
ಆಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಆಯಾ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ. ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಬಿ.ಎಸ್ಸಿ (ಕೃಷಿ) ಪದವಿ ಹೊಂದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ಶೇ. 50 ಅಂಕಗಳು ಕಡ್ಡಾಯವಾಗಿದ್ದರೆ, ಎಸ್ಸಿ, ಎಸ್ಟಿ, ಪಿಎಚ್ ವರ್ಗದ ಅಭ್ಯರ್ಥಿಗಳಿಗೆ ಶೇ. 45ರಷ್ಟು ಅಂಕಗಳ ಸಡಿಲಿಕೆ ನೀಡಲಾಗುತ್ತದೆ. ಜೂನಿಯರ್ ಅಸಿಸ್ಟೆಂಟ್ (ಕಾಟನ್ ಟೆಸ್ಟಿಂಗ್ ಲ್ಯಾಬೋರೇಟರಿ) ಹುದ್ದೆಗೆ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಅಥವಾ ಇನ್ಸ್ಟ್ರುಮೆಂಟೇಶನ್ ನಲ್ಲಿ ಡಿಪ್ಲೊಮಾ ಅಗತ್ಯವಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಮ್ಯಾನೇಜ್ ಮೆಂಟ್ ಟ್ರೈನಿ (ಮಾರ್ಕೆಟಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕೃಷಿ ವ್ಯವಹಾರ ನಿರ್ವಹಣೆ ಅಥವಾ ಸಂಬಂಧಿತ ಕ್ಷೇತ್ರದಲ್ಲಿ ಎಂಬಿಎ ಪದವಿ ಪಡೆದಿರಬೇಕು. ಮ್ಯಾನೇಜ್ ಮೆಂಟ್ ಟ್ರೈನಿ (ಲೆಕ್ಕಪತ್ರ ನಿರ್ವಹಣೆ) ಹುದ್ದೆಗೆ ಸಿಎ ಅಥವಾ ಸಿಎಂಎ ಪದವಿ ಹೊಂದಿರಬೇಕು ಎಂದು ತಿಳಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ.