ಬೆಳಗಾವಿ: ಚಿಕ್ಕೋಡಿಯಲ್ಲಿ ಕಳ್ಳರ ಕೈಚಳಕ ಮತ್ತೆ ಮುಂದುವರೆದಿದೆ.
ರಾಜಾರೋಷವಾಗಿಯೇ ಖತರ್ನಾಕ್ ಕಳ್ಳರ ಗ್ಯಾಂಗ್ ವೊಂದು ದೋಚುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದ ಗ್ಯಾಂಗ್ ಗಲ್ಲಿ ಗಲ್ಲಿಗಳಲ್ಲಿ ಓಡಾಡುತ್ತಿದ್ದಾರೆ. ಕಳೆದು ಹಲವು ದಿನಗಳಿಂದ ಖದೀಮರ ಹಾವಳಿ ಹೆಚ್ಚಾಗಿದ್ದು, ಕೈಯಲ್ಲಿ ಚಾಕು ತಲ್ವಾರ್ ಹಿಡಿದಿಕೊಂಡಿದ್ದ ಮೂವರು ಕಳ್ಳತನಕ್ಕೆ ಯತ್ನಿಸಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.