ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸೆಂಟರ್ ಫಾರ್ ಡೆವಲಪ್ ಮೆಂಟ್ ಆಫ್ ಅಡ್ವಾನ್ಸ್ಡ್ ಕಂಪ್ಯೂಟಿಂಗ್ ಸಂಸ್ಥೆಯಲ್ಲಿ (Centre for Development of Advanced Computing-C-DAC) ಖಾಲಿ ಇರುವ 63 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಜೂನ್ 23 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಒಟ್ಟು 63 ಸೈಂಟಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು, ದೆಹಲಿ ಸೇರಿ ದೇಶದ ಹಲವು ನಗರಗಳಲ್ಲಿರುವ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 78,800-2,16,600 ರೂಪಾಯಿ ವೇತನ ನೀಡಲಾಗುತ್ತದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಜನರಲ್, ಒಬಿಸಿ ಅಭ್ಯರ್ಥಿಗಳಿಗೆ 1 ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ನೇಮಕಾತಿ ಸಂಸ್ಥೆ: Centre for Development of Advanced Computing (C-DAC)
ಒಟ್ಟು ಹುದ್ದೆಗಳು: 63
ಹುದ್ದೆಗಳ ಹೆಸರು: ಸೈಂಟಿಸ್ಟ್
ಸಂಬಳ: 20 ಸಾವಿರ ರೂ.- 78 ಸಾವಿರ ರೂ.-2.16 ಲಕ್ಷ ರೂ.
ಸ್ಥಳ: ಬೆಂಗಳೂರು, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತ್ತ, ಮೊಹಾಲಿ, ಮುಂಬೈ, ಪುಣೆ, ನೊಯ್ಡಾ
ಅರ್ಜಿ ಸಲ್ಲಿಸುವುದು ಹೇಗೆ?
- ಸಿ-ಡಿಎಎಲ್ ಅಧಿಕೃತ ವೆಬ್ಸೈಟ್ https://cdac.in/ ಗೆ ಭೇಟಿ ನೀಡಬೇಕು
- ವಿಜ್ಞಾನಿ ಹುದ್ದೆಗಳ ಅರ್ಜಿ ನಮೂನೆಯನ್ನು ಡೌನ್ ಲೋಡ್ ಮಾಡಬೇಕು.
- ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಜಿ ಸಲ್ಲಿಸಿದ ಬಳಿಕ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಸುರಕ್ಷಿತವಾಗಿಡಬೇಕು.