ಬೆಂಗಳೂರು: ಕರ್ನಾಟಕದ ಕಲಬುರಗಿ ಜಿಲ್ಲೆ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK)ದಲ್ಲಿ ಖಾಲಿ ಇರುವ ಸಂಶೋಧನಾ ಸಹಾಯಕ ಹುದ್ದೆಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿ ಹೊಂದಿರುವ ಹಾಗೂ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬಹುದಾಗಿದೆ. ಮೇ 15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಒಂದು ಹುದ್ದೆ ಖಾಲಿ ಇದ್ದು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪಿಎಚ್.ಡಿ ಪೂರ್ಣಗೊಳಿಸಿರಬೇಕು. ಏಪ್ರಿಲ್ 23ರಿಂದಲೇ ಅರ್ಜಿ ಸ್ವೀಕಾರ ಆರಂಭವಾಗಿದೆ. ಹಾಗಾಗಿ, ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬೇಕಾಗಿದೆ.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಮಾಸಿಕ 37 ಸಾವಿರ ರೂ. ವೇತನ ನೀಡಲಾಗುತ್ತದೆ. ಕಿರುಪಟ್ಟಿ, ಸಂವಹನ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
– https://cuk.ac.in//home ಗೆ ಭೇಟಿ ನೀಡಬೇಕು.
– ಅಧಿಸೂಚನೆ ಲಿಂಕ್ ನಿಂದ ಸಂಶೋಧನಾ ಸಹಾಯಕ ಉದ್ಯೋಗಗಳಿಗಾಗಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
– ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
– ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ niranjanbgp@cuk.ac.in ಇಮೇಲ್ ವಿಳಾಸಕ್ಕೆ ಕಳುಹಿಸಬೇಕು.