ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಹ್ಯಾಟ್ರಿಕ್ ವಿಕೆಟ್ ಪಡೆಯುವುದರ ಮೂಲಕ ದಾಖಲೆಯೊಂದನ್ನು ಬರೆದಿದ್ದಾರೆ.
ಚಾಹಲ್ ಉತ್ತಮವಾಗಿ ಬೌಲಿಂಗ್ ಮಾಡಿ ಹ್ಯಾಟ್ರಿಕ್ ಪಡೆದಿದ್ದಾರೆ. ಈ ಮೂಲಕ ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಪಂಜಾಬ್ ಮೊದಲು ಬೌಲಿಂಗ್ ಮಾಡಿತ್ತು.
ಈ ಪಂದ್ಯದಲ್ಲಿ 19 ನೇ ಓವರ್ನಲ್ಲಿ ಚಾಹಲ್ ಈ ಸಾಧನೆ ಮಾಡಿದ್ದಾರೆ. ಹ್ಯಾಟ್ರಿಕ್ ವಿಕೆಟ್ ಪಡೆಯುವದಲ್ಲದೇ, ಒಂದೇ ಓವರ್ ನಲ್ಲಿ ನಾಲ್ಕು ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಎಂಎಸ್ ಧೋನಿ ಸೇರಿದಂತೆ ನಾಲ್ವರನ್ನು ಚಾಹಲ್ ಔಟ್ ಮಾಡಿದ್ದಾರೆ.