ಚಿಕ್ಕೋಡಿ: ಗೋ ರಕ್ಷಣೆಗೆ ಮುಂದಾದ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಹಾಗೂ ಹಿಂದೂ ಕಾರ್ಯಕರ್ತರು ಚಲೋ ಇಂಗಳಿಗೆ ಕರೆ ನೀಡಿದ್ದಾರೆ.
ಶ್ರೀರಾಮಸೇನೆ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಚಲೋ ಇಂಗಳಿ ಕರೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಲಾಗಿತ್ತು. ಹೀಗಾಗಿ ಜುಲೈ 3ರಂದು ಮುತ್ತಿಗೆ ಹಾಕಲು ಕಾರ್ಯಕರ್ತರು ನಿರ್ಧರಿಸಿದ್ದಾರೆ.
ಈ ಕುರಿತು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಕರೆ ಕೊಟ್ಟಿದ್ದಾರೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ರಾಜ್ಯಾದ್ಯಂತ ಗೋರಕ್ಷಕರು, ಹಿಂದೂ ಕಾರ್ಯಕರ್ತರು ಈ ವೇಳೆ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.