ಬೆಂಗಳೂರು: ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ತಡರಾತ್ರಿ 12 ಗಂಟೆ ಸುಮಾರಿಗೆ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ.
ಚಂದ್ರಶೇಖರನಾಥ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ಇಂದು (ಶನಿವಾರ) ಶ್ರೀಮಠದ ಆವರಣದಲ್ಲೇ ಅವಕಾಶ ಮಾಡಿಕೊಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅಂತಿಮ ವಿಧಿ ವಿಧಾನಗಳು ನೆರವೇರಲಿದೆ.
ಉತ್ತರಾಧಿಕಾರಿ ಪೀಠಾಧ್ಯಕ್ಷರಾದ ಡಾ.ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಹಲವು ಧಾರ್ಮಿಕ ಮುಖಂಡರುಗಳ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿಸಲಿದ್ದಾರೆ ಎಂದು ತಿಳಿದು ಬಂದಿದೆ.