ಬೆಂಗಳೂರು: ಸಿಗರೇಟ್ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.
ಸಾಫ್ಟವೇರ್ ಉದ್ಯೋಗಿ ಕೊಲೆಯಾಗಿರುವ ವ್ಯಕ್ತಿ ಎನ್ನಲಾಗಿದೆ. ಸಿಗರೇಟ್ ವಿಚಾರಕ್ಕೆ ಕಿರಿಕ್ ತೆಗೆದು ಕಾರು ಗುದ್ದಿಸಿ ಸಾಫ್ಟ್‌ವೇರ್ ಉದ್ಯೋಗಿಯನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಈ ಘಟನೆ ನಗರದ ಕನಕಪುರ ರಸ್ತೆಯ ವಸಂತಪುರ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ. ಟೆಕ್ಕಿ ಸಂಜಯ್ ಕೊಲೆಯಾಗಿರುವ ದುರ್ದೈವಿ.
ಸಾಫ್ಟ್ ವೇರ್ ಉದ್ಯೋಗಿಗಳಾಗಿದ್ದ ಸಂಜಯ್, ಕಾರ್ತಿಕ್ ಸಿಗರೇಟ್ ಸೇದಲು ಕಚೇರಿಯಿಂದ ಹೊರಗೆ ಬಂದಿದ್ದರು. ಈ ವೇಳೆ ಕಾರಿನಲ್ಲಿ ಪ್ರತೀಕ್ ಬಂದು, ಸಂಜಯ್‌ಗೆ ಸಿಗರೇಟ್ ತಂದುಕೊಡುವಂತೆ ಹೇಳಿದ್ದ. ಇದರಿಂದ ಕೋಪಗೊಂಡ ಸಂಜಯ್ ಮತ್ತು ಕಾರ್ತಿಕ್ ಜಗಳವಾಡಿದ್ದಾರೆ. ಕೋಪಗೊಂಡ ಪ್ರತೀಕ್ ಕಾರಿನಲ್ಲಿ ಮುಂದೆ ಹೋಗಿ ರಸ್ತೆ ಪಕ್ಕದಲ್ಲೇ ನಿಲ್ಲಿಸಿಕೊಂಡಿದ್ದ. ಸಿಗರೇಟ್ ಸೇದಿ ಇಬ್ಬರೂ ಬೈಕ್‌ನಲ್ಲಿ ಮುಂದೆ ಬರುತ್ತಿದ್ದಂತೆ. ವೇಗವಾಗಿ ಬಂದು ಇಬ್ಬರು ಹೋಗುತ್ತಿದ್ದ ಬೈಕ್‌ಗೆ ಕಾರನ್ನು ಡಿಕ್ಕಿ ಹೊಡೆಸಿದ್ದಾನೆ. ಪರಿಣಾಮ ಸಂಜಯ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರ್ತಿಕ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುಬ್ರಮಣ್ಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿಯನ್ನು ಬಂಧಿಸಿದ್ದಾರೆ.