ಬೆಂಗಳೂರು: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಸಂಬಂಧ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ಧರಾಮಯ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ತಮ್ಮ ಕೊಠಡಿಗೆ ಕರೆಸಿಕೊಂಡು 45 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಪ್ರಕರಣದಲ್ಲಿ ಏನೇನು ನಡೆದಿದೆ? ಡಿಜಿಪಿ ರಾಮಚಂದ್ರರಾವ್ ಅವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ? ಒಂದು ವೇಳೆ ಭಾಗಿಯಾಗಿದ್ದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ.