ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಎಐ ಬಳಸಿ ಕಿಡಿಗೇಡಿಗಳು ಸಿಎಂ ಸಿದ್ದರಾಮಯ್ಯ ತೇಜೋವಧೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಎಫ್ ಐಆರ್ ದಾಖಲಾಗಿದೆ.

ಸಿಎಂ ಪಾಕಿಸ್ತಾನ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿ ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಿದ್ದಾರೆ. ಈ ಕುರಿತು ನಮ್ಮ ಮೋದಿ ಎಂಬ ಇನ್ಸ್ತಾಗ್ರಾಂ ಪೇಜ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಸಿಎಂ ಉಪ ಕಾರ್ಯದರ್ಶಿ ಅರುಣ್ ಫುರ್ಟಾಡೊ ನೀಡಿದ ದೂರಿನ ಹಿನ್ನೆಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸಿಎಂ ಕೈಯಲ್ಲಿ ಶತ್ರು ರಾಷ್ಟ್ರದ ಧ್ವಜ ನೀಡಿ ನೃತ್ಯ ಮಾಡುವಂತೆ ನಕಲಿ ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಿದವರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಕೆ ಮಾಡಲಾಗಿದೆ.