ಬೆಂಗಳೂರು: ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಜೆ.ಸಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂವಿಧಾನಕ್ಕೆ ಅಪಚಾರವೆಸಗಿದ್ದಾರೆ ಎಂದು ಆರೋಪಿಸಿ ಸಚಿವ ಕೆ.ಎನ್.ರಾಜಣ್ಣ (K. N. Rajanna) ವಿರುದ್ಧ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ದೂರು ಸಲ್ಲಿಸಿದ್ದಾರೆ.
ಪ್ರಮಾಣವಚನ ಸ್ವೀಕಾರ ವೇಳೆ ಗೌಪ್ಯತೆ ಕಾಪಾಡುತ್ತೇನೆಂದು ಹೇಳಿ, ಸಚಿವರಾಗಿ ಸದನದಲ್ಲಿ ಹನಿಟ್ರ್ಯಾಪ್ (Honeytrap) ವಿಚಾರ ಪ್ರಸ್ತಾಪಿಸಿದ್ದಾರೆ. ಆ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ ಎಂದು ದೂರಿನಲ್ಲಿ ಹೇಳಇದ್ದಾರೆ.
ನಮ್ಮ ಬಳಿ ಸಿಡಿ ಇವೆ ಅಂತಾ ಹೇಳಿದ್ದಾರೆ. ಹೀಗಾಗಿ ಪೊಲೀಸರು ಕೂಡಲೇ ಸಿಡಿ ವಶಕ್ಕೆ ಪಡೆದು ಎಲ್ಲಿದೆ ಅಂತ ಪತ್ತೆಹಚ್ಚಬೇಕು. 48 ಗಂಟೆಯಲ್ಲಿ ಸಚಿವರ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಡುತ್ತೇನೆ ಎಂದಿದ್ದಾರೆ.