ದಾವಣಗೆರೆ: ಭದ್ರಾ ಬಲದಂಡೆ ಕಾಮಗಾರಿ ವಿರೋಧಿಸಿ ರೈತ ಒಕ್ಕೂಟ ಹಾಗೂ ಬಿಜೆಪಿ ವತಿಯಿಂದ ದಾವಣಗೆರೆ ಬಂದ್ ಗೆ ಕರೆ ನೀಡಲಾಗಿತ್ತು.
ಆದರೆ, ಈ ವೇಳೆ ಬಿಜೆಪಿ ಸುಳ್ಳು ಮಾಹಿತಿ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ರಸ್ತೆಯಲ್ಲೇ ತಡೆದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾಧ್ಯಕ್ಷ ಸೇರಿ 30ಕ್ಕೂ ಅಧಿಕ ಕಾಂಗ್ರೆಸ್ ಕಾರ್ಯಕರ್ತರು ಬಂಧಿಸಿ ಬಿಡುಗಡೆ ಮಾಡಲಾಯಿತು.