ಕಾಫಿನಾಡಿನಲ್ಲಿ ಮಳೆ ಮುಂದುವರೆದಿದ್ದು ಹಲವೆಡೆ ಸಾಕಷ್ಟು ಅವಾಂತರಗಳು ನಡೆದಿವೆ. ಶೃಂಗೇರಿ ತಾಲೂಕಿನ ಮೆಣಸೆ ಸಮೀಪದ ಕಲ್ಕಟ್ಟೆ ಆಶ್ರಯ ಬಡಾವಣೆಯಲ್ಲಿ ಮನೆಯ ಹಂಚು ಶೀಟ್ ಗಳು ಹಾರಿ ಹೋಗಿವೆ. ಬೀಸಿದ ಬಿರುಗಾಳಿಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿದೆ.
ಚಿಕ್ಕಮಗಳೂರು NR ಪುರ ತಾಲೂಕಿನ ಭಾಗದಲ್ಲಿ ವ್ಯಾಪಕ ಮಳೆ ಸುರಿದಿದ್ದು ಜನ – ಜೀವನ ಅಸ್ತವ್ಯಸ್ಥಗೊಂಡಿದೆ. ಗುಡುಗು ಮಿಂಚು ಸಹಿತ ಬಿರುಗಾಳಿ ಮಳೆಯಾಗಿದೆ. ಕಳೆದ ಒಂದು ವಾರದಿಂದಲೂ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಸಾಲು ಸಾಲು ಅವಾಂತರಗಳು ಸೃಷ್ಟಿಯಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿ ಕೂಡ ಇದೇ ಪರಿಸ್ಥಿತಿ ಮುಂದುವರೆದಿದೆ.