ಬೆಂಗಳೂರು: ದೇಶ ಹಾಗೂ ರಾಜ್ಯಕ್ಕೆ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ನಗರದಲ್ಲಿ 9 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆಯಾಗಿದೆ.
ಹೊಸಕೋಟೆ ದಂಪತಿಯ ಮಗುವಿನಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಮಗುವಿಗೆ ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರ ಬಂದಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಮಗುವನ್ನು ದಾಖಲಿಸಲಾಗಿತ್ತು. ಮಗುವಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಪಾಸಿಟಿವ್ ಬಂದಿದೆ.
ಸದ್ಯ ಮಗುವನ್ನು ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೇ 22ರ ರಾತ್ರಿ ಮಗುವನ್ನು ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ ಎನ್ನಲಾಗಿದೆ. ಈಗಾಗಲೇ ಕೊರೊನಾ ಸೋಂಕು ಹಾಂಕಾಂಗ್ ಹಾಗೂ ಸಿಂಗಾಪುರನಲ್ಲಿ ವ್ಯಾಪಕವಾಗಿ ಹಬ್ಬಿದ್ದು, ಅಲ್ಲಿನ ಜನ ಸಾವು- ನೋವಿನಲ್ಲಿ ಬದುಕು ಸಾಗಿಸುತ್ತಿದ್ದಾರೆ.