ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಆತಂಕ ವ್ಯಕ್ತವಾಗುತ್ತಿದೆ.
ಈಗಾಗಲೇ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1500ರ ಗಡಿ ದಾಟಿ ಸಾಗುತ್ತಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 467 ಆಕ್ಟೀವ್ ಕೇಸ್ ಗಳಿವೆ. ಕಳೆದ 24 ಗಂಟೆಗಳಲ್ಲಿ 28 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ನಿನ್ನೆ ಒಂದೇ ದಿನ 20 ಜನ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯಾದ್ಯಂತ 619 ಜನರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದೆ. ಸಧ್ಯ ಶೇ. 4.5 ರಷ್ಟು ಪಾಸಿಟಿವಿಟಿ ರೇಟ್ ಇಳಿಕೆ ಕಂಡಿದೆ.