ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಮತ್ತೆ ಕೋವಿಡ್ ಆತಂಕ ಹಿನ್ನಲೆ, ದೇವನಹಳ್ಳಿ ಆಸ್ಪತ್ರೆಯಲ್ಲಿ ಬಿಗಿ ಕ್ರಮವನ್ನು ಕೈಗೊಳ್ಳಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಿಕೊಂಡಿರುವ ಪಟ್ಟಣದಲ್ಲಿ ಅಲರ್ಟ್ ಆಗಿದ್ದು, ದೇವನಹಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಕೋವಿಡ್ ಎದುರಿಸಲು ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. 4 ಆಕ್ಸಿಜನ್ ಪ್ಲಾಂಟ್ ರೀ ರನ್ನಿಂಗ್ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದ್ದು, ಆಸ್ಪತ್ರೆ ಆವರಣದಲ್ಲಿರುವ ಆಕ್ಸಿಜನ್ ಪ್ಲಾಂಟ್ ಕಾರ್ಯದ ಕುರಿತು ಪರಿಶೀಲನೆ ನಡೆಸಿದ್ದಾರೆ.
ಆಸ್ಪತ್ರೆಯ ಸಿಬ್ಬಂದಿಗಳು ಆಕ್ಸಿಜನ್ ಪ್ಲಾಂಟ್ ಸುತ್ತಾಮುತ್ತ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಜೊತೆಗೆ ಈಗಾಗಲೇ 120 ಆಕ್ಸಿಜನ್ ಸಿಲಿಂಡರ್ ರೀಫಿಲ್ ಮಾಡಲು ಆಡಳಿತ ಮಂಡಳಿ ನಿರ್ಧಾರ ಮಾಡಿದೆ. 100 ಕೋವಿಡ್ ಬೆಡ್ ಹೊಂದಿರುವ ಆಸ್ಪತ್ರೆಯಲ್ಲಿ ಕೊರೋನಾ ಎದುರಿಸಲು ಸನ್ನದ್ಧರಾಗಿದ್ದಾರೆ. ಇನ್ನು ಕೋವಿಡ್ ಟೆಸ್ಟ್ ಮಾದರಿಗಳನ್ನು ಸಂಗ್ರಹಿಸಲು ಮುಂದಾಗಿರುವ ಆರೋಗ್ಯ ಸಿಬ್ಬಂದಿ. ಯಾವುದೇ ಕ್ಷಣದಲ್ಲಾದರು ಪರಿಸ್ಥಿತಿ ಎದುರಿಸಲು ಸಿದ್ದರಾಗಿದ್ದಾರೆ.