ಉಡುಪಿ: ಕುಂಜಾಲು ಪರಿಸರದಲ್ಲಿ ಗೋವಿನ ರುಂಡ ಪತ್ತೆಯಾಗಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕುಂಜಾಲುವಿನ ಮುಖ್ಯ ರಸ್ತೆಯಲ್ಲಿ ರಾತ್ರಿ ಹಸುವಿನ ರುಂಡ ಪತ್ತೆಯಾಗಿದೆ. ಈ ಕೃತ್ಯವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಖಂಡಿಸಿದ್ದಾರೆ. ಕೂಡಲೇ ಆರೋಪಿಗಳನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಹಿಂದೆಯೂ ಇಂತಹ ಘಟನೆಗಳು ನಡೆದಾಗ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಆರೋಪಿಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಗುಡುಗಿದ್ದಾರೆ.