ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದಲೂ ಸಿಎಂ ಬದಲಾವಣೆಯ ಕೂಗು ಕೇಳಿ ಬರುತ್ತಿದೆ. ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೆಸರು ಆಗಿನಿಂದಲೂ ಕೇಳಿ ಬರುತ್ತಿದೆ. ಆಗಾಗ ಡಿಸಿಎಂ ಡಿಕೆಶಿ ಅವರು ಸಿಎಂ ಸ್ಥಾನದ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸುತ್ತಿದ್ದರು. ಈಗ ಮತ್ತೊಮ್ಮೆ ಆ ಆಸೆಯನ್ನು ವ್ಯಕ್ತಪಡಿಸಿದ್ದಾರೆ.
ಕಾರ್ಯಕ್ರಮದ ವೇಳೆ ಡಿಕೆ..ಡಿಕೆ..ಡಿಕೆ..ಎಂದ ಅಭಿಮಾನಿಗಳಿಗೆ ತಮ್ಮ ಮನದ ಇಂಗಿತ ವ್ಯಕ್ತಪಡಿಸಿದ್ದಾರೆ. ಮುಂದಿನ ಬಾರಿಯೂ ಡಿಕೆ ಶಿವಕುಮಾರ್ಗೆ ನೀವು ಶಕ್ತಿ ಕೊಡಬೇಕು ಎಂದು ಮನವಿ ಮಾಡಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಕೆಪಿಟಿಸಿಎಲ್ (KPTCL) ನೌಕರರ ಸಂಘದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗ ಡಿಕೆ ಡಿಕೆ ಅನ್ನೋದು ಅಲ್ಲ. ಎಲೆಕ್ಷನ್ ನಲ್ಲಿ ಇನ್ನೊಂದು ಸಾರಿ ಡಿಕೆ ಶಿವಕುಮಾರ್ ತಂದು ಕೂರಿಸಿದ ಮೇಲೆ ಈ ಘೋಷಣೆ ಕೂಗಿ ಎಂದರು.