ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ತಂದೆ, ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಬಸವರಾಜ ಬಂಡಿವಡ್ಡರ್(26) ಹಾಗೂ ಮತ್ತಿ ಹುಲಿಗೆಮ್ಮ(3) ಸಾವನ್ನಪ್ಪಿರುವ ದುರ್ದೈವ ತಂದೆ ಹಾಗೂ ಮಗಳು ಎನ್ನಲಾಗಿದೆ.
ತಂದೆ ಹಾಗೂ ಮಗಳು ಬೈಕ್ ನಲ್ಲಿ ಹಳಗೇರಿ ಆಂಜನೇಯ ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬಾದಾಮಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.