ನಾಗಿಣಿ ಸೀರಿಯಲ್ ಮೂಲಕ ಎಲ್ಲರ ಮನೆ ಮಾತಗಿದ್ದ ನಟಿ ದೀಪಿಕಾ ದಾಸ್ ಸಾಮಾಜಿಕ ಜಾಲತಾಣದಿಂದ ಬ್ರೇಕ್ ತೆಗೆದುಕೊಳ್ಳುತ್ತೇನೆಂದು ಪೋಸ್ಟ್ ಮಾಡುವ ಮೂಲಕ ಫ್ಯಾನ್ಸ್ ಗೆ ಶಾಕ್ ನೀಡಿದ್ದಾರೆ.
ಕನ್ನಡ ಕಿರುತೆರೆ ಮೂಲಕ ಹೆಸರು ಮಾಡಿದ್ದ ನಟಿ ದೀಪಿಕಾದಾಸ್ ಸಾಮಾಜಿಕ ಜಾಲತಾಣದ ಮೂಲಕ ಆಕ್ಟೀವ್ ಆಗಿರುತ್ತಿದ್ದರು. ವಿದೇಶಗಳಿಗೆ ಪ್ರಯಾಣ, ವರ್ಕ್ ಔಟ್ ಸೇರಿದಂತೆ ಹಲವಾರು ಅಪ್ಡೇಟ್ ಗಳನ್ನು ನೀಡುತ್ತಿರುತ್ತಾರೆ. ಈಗ ಸಾಮಾಜಿಕ ಜಾಲತಾಣದಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದು, ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 7’ರ ನಂತರ ದೀಪಿಕಾ ದಾಸ್ ಹಲವಾರು ಅಭಿಮಾನಿಗಳನ್ನು ಹೊಂದಿದ್ದರು.