ಬೆಂಗಳೂರು: ಮಳೆಗಾಲ (Mansoon) ಆರಂಭವಾಗುತ್ತಿದ್ದಂತೆ ರೋಗಗಳ ಭಯ ಶುರುವಾಗಿದೆ. ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ಡೆಂಗ್ಯೂ ಆತಂಕ ಶುರುವಾಗಿದ್ದು, ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಹೀಗಾಗಿ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಡೆಂಗ್ಯೂ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು 700 ಸ್ವಯಂ ಸೇವಕರನ್ನು ನೇಮಿಸಲಾಗಿದೆ.
ಬೆಂಗಳೂರಿನಲ್ಲಿ ಶೇ 40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿವೆ. ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ ಅಭಿಯಾನಕ್ಕೆ ಆರೋಗ್ಯ ಇಲಾಖೆ ಚಾಲನೆ ಕೊಟ್ಟಿದೆ.