ಬೆಂಗಳೂರು: ಧರ್ಮಸ್ಥಳ ಪ್ರಕರಣದ ಬಗ್ಗೆ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಟ ಪ್ರಕಾಶ್ ರಾಜ್, “ನೀವು ಜನ ಪ್ರತಿನಿಧಿಗಳಾ ಅಥವಾ ಇನ್ಯಾರದೋ ದಲ್ಲಾಳಿಗಳಾ” ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.
ಈ ಸಂಬಂಧಿಸಿದಂತೆ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಖಾತೆ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಪ್ರಕಾಶ್ ರಾಜ್, “ಅಶ್ರೀ ಆಶೋಕ್ ಅವರೆ, ದಶಕಗಳಿಂದ ನಮ್ಮ ಹೆಣ್ಣುಮಕ್ಕಳ ಅತ್ಯಾಚಾರಗಳಾಗಿವೆ, ಅಮಾನವೀಯ ಹತ್ಯೆಗಳಾಗಿವೆ, ಜನರ ಆಕ್ರೋಶ ಭುಗಿಲೆದ್ದಿದೆ. ಕೊನೆಗೂ ಸರ್ಕಾರ ಸ್ಪಂದಿಸಿ SIT ರಚನೆಯಾಗಿದೆ. ತನಿಖೆ ನಡೆಯುತ್ತಿದೆ. ಮದ್ಯದಲ್ಲಿ ನಿಮ್ದೇನ್ರಿ. ನೀವು ಜನ ಪ್ರತಿನಿಧಿಗಳಾ.. ಅಥವಾ ಇನ್ಯಾರದೋ ದಲ್ಲಾಳಿಗಳಾ.. #justasking” ಎಂದು ಆಕ್ರೋಶ ಹೊರ ಹಾಕಿದ್ದಾರೆ.
‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣದ ದೂರುದಾರ ಅನಾಮಧೇಯ ವ್ಯಕ್ತಿಯ ಹಿಂದೆ ಕೇರಳ ಸರಕಾರ ಇದೆ’ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದರು.