ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು (DHFWS Chikkaballapur Recruitment 2025) ಇನ್ಸೆಕ್ಟ್ ಕಲೆಕ್ಟರ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಪಿಯುಸಿ ಪಾಸಾದವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಆಗಸ್ಟ್ 21ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ chikkaballapur.nic.in ಗೆ ಭೇಟಿ ನೀಡಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಚಿಕ್ಕಬಳ್ಳಾಪುರ
ಹುದ್ದೆ ಹೆಸರು: ಇನ್ಸೆಕ್ಟ್ ಕಲೆಕ್ಟರ್
ಒಟ್ಟು ಹುದ್ದೆ: 01
ಉದ್ಯೋಗ ಸ್ಥಳ: ಚಿಕ್ಕಬಳ್ಳಾಪುರ, ಕರ್ನಾಟಕ
ನೇಮಕಾತಿ ವಿಧಾನ: ಸಂದರ್ಶನ
ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗರಿಷ್ಠ 40 ವರ್ಷದೊಳಗಿನವರು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 15,114 ರೂಪಾಯಿ ಸಂಬಳ ನೀಡಲಾಗುತ್ತದೆ. ಚಿಕ್ಕಬಳ್ಳಾಪುರದಲ್ಲೇ ಉದ್ಯೋಗ ಹಿಡಿಯಬೇಕು ಎನ್ನುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ.
ಸಂದರ್ಶನದ ವಿವರ
ದಿನಾಂಕ: ಆಗಸ್ಟ್ 21
ಸ್ಥಳ: Office of District Health and Family Welfare Officers, Chikkaballapur, Karnataka
ಸಮಯ: ಬೆಳಗ್ಗೆ 11 ಗಂಟೆ
ನೇರ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಒಂದು ಸೆಟ್ ಜೆರಾಕ್ಸ್ (ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಆಧಾರ್ ಜೆರಾಕ್ಸ್ ಪ್ರತಿ, ಕಂಪ್ಯೂಟರ್ ಸಾಕ್ಷರತಾ ಪ್ರಮಾಣ ಪತ್ರ, ಜನ್ಮ ದಿನಾಂಕ ದೃಢೀಕರಣ ಪ್ರತಿ {ಎಸ್.ಎಸ್.ಎಲ್.ಸಿ ಅಂಕ ಪಟ್ಟಿ) ಮತ್ತು ವಿಳಾಸ ದೃಢೀಕರಣ ಪತ್ರ ಒಳಗೊಂಡಂತೆ) ಪ್ರತಿಗಳೊಂದಿಗೆ ನಿಗದಿತ ಸಮಯದೊಳಗಾಗಿ ಹಾಜರಾಗಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.


















