ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು.
ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದಿದ್ದಾರೆ.