ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಸೈಬರ್ ಕ್ರೈಂ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ CEN ಪೊಲೀಸರ ತನಿಖೆ ವೇಳೆ ಮಧ್ಯವರ್ತಿಗಳ ಪಾತ್ರ ಸಾಬೀತಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸಿಬ್ಬಂದಿ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ. ಒಂದು ಸೀಟ್ ನ್ನು 60 ಲಕ್ಷ ರೂ. ಗಳವರೆಗೆ ಮಾರಾಟ ಮಾಡಿರುವ ಸಂಗತಿ ಬಯಲಾಗಿದೆ. ಬ್ಲಾಕ್ ಮಾಡಿದ್ದ ಸೀಟ್ ಗಳನ್ನು 60 ಲಕ್ಷ ರೂ. ಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಮಧ್ಯವರ್ತಿಗಳು ಅಭ್ಯರ್ಥಿಗಳ ಲಾಗಿನ್ ಪಾಸ್ ವರ್ಡ್, ಸೀಕ್ರೆಟ್ ಕೀ ಬಳಸಿ ತಮ್ಮ ಪರ ಆಯ್ಕೆ ಮಾಡುತ್ತಿದ್ದರು ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು 18 ಕಡೆ ದಾಳಿ ನಡೆಸಿದ್ದರು. ನಗರದ BMS ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿ, 7 ಸಿಬ್ಬಂದಿಗಳ ಕಡತ ಪರಿಶೀಲನ ನಡೆಸಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ನ್ನು ಸಲ್ಲಿಸಿದ್ದಾರೆ.