ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಹಿಡಿಯಬೇಕು, ಅದರಲ್ಲೂ ಬೆಂಗಳೂರಿನಲ್ಲಿ ಕೆಲಸ ಮಾಡಬೇಕು ಎನ್ನುವವರಿಗೆ ಗುಡ್ ನ್ಯೂಸ್ ಇದೆ. ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ (ESIC) ಖಾಲಿ ಇರುವ 23 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಜುಲೈ 9ರಂದು ನೇರ ಸಂದರ್ಶನ ನಡೆಯಲಿದೆ. ನೇರ ಸಂದರ್ಶನಕ್ಕೆ ಹಾಜರಾಗುವ ಮೂಲಕ ಅಭ್ಯರ್ಥಿಗಳು ಉದ್ಯೋಗ ಗಿಟ್ಟಿಸಿಕೊಳ್ಳಬಹುದಾಗಿದೆ.
ಇಎಸ್ಐಸಿ ಕರ್ನಾಟಕ ನೇಮಕಾತಿ ಅಧಿಕೃತ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ, ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ಗರಿಷ್ಠ ವಯಸ್ಸು 24-02-2025 ರಂತೆ 30 ವರ್ಷದೊಳಗಿನವರಾಗಿರಬೇಕು.
ಅರ್ಜಿ ಹಾಗೂ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಮಾಸಿಕ 60,000-2,00,000 ರೂ. ವೇತನ ನೀಡಲಾಗುತ್ತದೆ. ಅಗತ್ಯ ದಾಖಲೆಗಳು ಸೇರಿ ಯಾವುದೇ ರೀತಿಯ ಹೆಚ್ಚಿನ ಮಾಹಿತಿಗೆ esic.gov.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಜುಲೈ 9ರಂದು ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಬೇಕು. ಗೇಟ್ ಅಂಕಗಳು, ಸಂದರ್ಶನ ಹಾಗೂ ದಾಖಲೆ ಪರಿಶೀಲನೆ ಬಳಿಕ ನೇಮಕಾತಿ ಮಾಡಲಾಗುತ್ತದೆ. ಸಂದರ್ಶನ ನಡೆಯುವ ಸ್ಥಳ: Office of the Medical Superintendent, ESIC Hospital, Peenya, Bengaluru, Karnataka.