ಬೆಂಗಳೂರು: ನ 2024ರ ಶೈಕ್ಷಣಿಕ ಸಾಲಿನ ಎಂಬಿಎ, ಎಂಸಿಎ, ಎಂ.ಇ., ಎಂ.ಟೆಕ್., ಎಂ.ಆರ್ಕಿಟೆಕ್ಚರ್ ಕೋರ್ಸುಗಳ ಪ್ರವೇಶಕ್ಕೆ ಅರ್ಹತೆ ನಿರ್ಧರಿಸಲು ಜು.13 ಮತ್ತು 14 ರಂದು ನಡೆಸಲು ನಿಗದಿಪಡಿಸಲಾಗಿದ್ದ ಪಿಜಿಸಿಇಟಿ-2024ರ ಪರೀಕ್ಷೆ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಹೇಳಿದೆ.

ವಿವಿಧ ವಿಶ್ವವಿದ್ಯಾಲಯಗಳ ಪದವಿ ತರಗತಿಗಳ ಅಂತಿಮ ಸೆಮಿಸ್ಟರ್ ಪರೀಕ್ಷೆಗಳು ಜುಲೈ 5 ಹಾಗೂ ಜುಲೈ 10 ರಿಂದ ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪರೀಕ್ಷೆ ನಡೆಯುವ ಹೊಸ ದಿನಾಂಕವನ್ನು ಮುಂಬರುವ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮಂಗಳವಾರ ತಿಳಿಸಿದ್ದಾರೆ.

ಪಿಜಿಸಿಇಟಿ-2024ಕ್ಕೆ ನೋಂದಣಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದಕ್ಕೂ ಕಾಲಾವಕಾಶ ವಿಸ್ತರಣೆ ಮಾಡಿ ಅಂತಿಮ ಅವಕಾಶ ಕಲ್ಪಿಸಲಾಗಿದೆ. ಇಲ್ಲಿಯವರೆಗೆ ನೋಂದಣಿ ಮಾಡದೇ ಇರುವ ಆಸಕ್ತ ಅಭ್ಯರ್ಥಿಗಳು ಜುಲೈ 7ರ ಒಳಗೆ ನೋಂದಣಿ ಮಾಡಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಿ ಜುಲೈ 9ರ ಸಂಜೆ 6.00 ರೊಳಗೆ ಶುಲ್ಕ ಪಾವತಿಸಬಹುದು. ಅಭ್ಯರ್ಥಿಗಳು ಮಾಹಿತಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಪರಿಶೀಲನೆ ನಡೆಸಬಹುದು.