ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಾದಿ-ಬೀದಿ ರಂಪವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಧ್ಯೆ ದೊಡ್ಡ ಸಮರ ಶುರುವಾಗಿದೆ. ಇದು ದೊಡ್ಡ ಮುಜುಗರಕ್ಕೆ ಕಾರಣವಾಗುತ್ತಿದೆ. ಈ ಮಧ್ಯೆ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಆಗಮಿಸುತ್ತಿದ್ದು, ಸಮಸ್ಯೆ ಬಗೆ ಹರಿಸಲು ಮುಂದಾಗಲಿದ್ದಾರೆ.
ಡಿ. 3 ರಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಪಕ್ಷದ ಸಂಘಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅವರು ರಾಜ್ಯಕ್ಕೆ ಆಗಮಿಸಿಸುತ್ತಿದ್ದರೂ, ಈ ಭೇಟಿಯ ಸಂದರ್ಭದಲ್ಲಿ ಭಿನ್ನಾಭಿಪ್ರಾಯಗಳ ಬಗ್ಗೆಯೂ ಮಾತುಕತೆ ನಡೆಸುವ ಸಾಧ್ಯತೆ ಇದೆ. ತರುಣ್ ಚುಗ್ ಬಳಿಕ ಬಿಜೆಪಿಯ ಭಿನ್ನಮತದ ಬಗ್ಗೆ ಒಂದು ಬಣ ಗಮನ ಸೆಳೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ರಾಜ್ಯಕ್ಕೆ ಆಗಮಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ನಾನು ವೈಯಕ್ತಿಕವಾಗಿ ಭೇಟಿ ಮಾಡುವುದಿಲ್ಲ. ಬದಲಾಗಿ, ನಮ್ಮ ಗುಂಪನ್ನು ಮಾತುಕತೆ ಕರೆದರೆ ಹೋಗುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.