ಚಿಕ್ಕಬಳ್ಳಾಪುರ: ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ನಡೆದಿದೆ. ಅಂಗಡಿ ಜಾಗಕ್ಕಾಗಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿ ನಡೆಸಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ರಾಡ್ ಗಳಿಂದ ಎರಡು ಗುಂಪುಗಳ ಪರಸ್ಪರ ಮಾರಾಮಾರಿ ನಡೆಸಿವೆ. ಮಹಿಳೆಯರು ಹಾಗೂ ಪುರುಷರು ಪರಸ್ಪರ ಹೊಡೆದಾಟ ನಡೆಸಿದ್ದಾರೆ. ನಡು ರಸ್ತೆಯಲ್ಲೇ ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಅಪೀಸ್ ವುಲ್ಲಾಖಾನ್ ಮೇಲೆ ಮತ್ತೊಂದು ಗುಂಪು ಹಲ್ಲೆ ನಡೆಸಿದ್ದಾರೆ. ಸುಲ್ತಾನ್, ಕೌಸರ್, ಅಲೀಮ್, ನಿಸಾಮ್, ಇರ್ಪಾನ್ ಎಂಬುವವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಎರಡೂ ಗುಂಪಿನವರು ಗಾಯಗೊಂಡಿದ್ದು, ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಿಗದೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.