ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಪತ್ನಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಹಾಗೂ ಪತ್ನಿ ಸುನೀತ ನಾಯ್ಡು ವಿರುದ್ದ ಎಫ್ ಐಆರ್ ದಾಖಲಾಗಿದೆ. CBSE ಅಫಿಲೇಷನ್ ಪಡೆಯಲು ನಕಲಿ ಪ್ರಮಾಣಪತ್ರ ಸಲ್ಲಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಗುರಪ್ಪ ನಾಯ್ಡು ಮಾಲೀಕತ್ವದ ಬ್ಲೂಮ್ ಫೀಲ್ಡ್ ಶಾಲೆಗೆ CBSE ಅಫಿಲೇಷನ್ ಪಡೆಯಲು ನಕಲಿ ದಾಖಲೆ ಸಲ್ಲಿಸಿರುವ ಆರೋಪ ಕೇಳಿ ಬಂದಿದೆ.
ಬೆಂಗಳೂರಿನ ತ್ಯಾಗರಾಜನಗರದಲ್ಲಿನ ಬ್ಲೂಮ್ ಫೀಲ್ಡ್ ಶಾಲೆಗೆ ಈ ರೀತಿ ನಕಲಿ ದಾಖಲೆ ಸೃಷ್ಟಿಸಲಾಗಿದೆ. ವಕೀಲೆ ಸುಧಾ ಕಾಟವಾ ನೀಡಿರುವ ದೂರಿನನ್ವಯ ಎಫ್.ಐ.ಆರ್ ದಾಖಲಾಗಿದೆ. ವಕೀಲೆ ಸುಧಾ ಕಾಟವಾ ಅವರು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ BNS 336(2),336(3),340(2) ಅಡಿ ದೂರು ದಾಖಲಿಸಿದ್ದು, ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ. ಶಾಲೆಯ ಅಧ್ಯಕ್ಷ ಗುರಪ್ಪ ನಾಯ್ಡು, ಟ್ರಸ್ಟಿ ಸುನೀತಾ ನಾಯ್ಡು ವಿರುದ್ದ ಎಫ್ ಐಆರ್ ದಾಖಲಾಗಿದೆ.