ಬೆಂಗಳೂರು/ಬೆಳ್ತಂಗಡಿ : ಹುಬ್ಬಳ್ಳಿಯಿಂದ ರೌಡಿಶೀಟರ್ನನ್ನು ಕರೆತಂದು ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯಿಸಿ ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಗಿರೀಶ್ ಮಟ್ಟಣ್ಣನವರ್ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರದ ಭಕ್ತ ಪ್ರವೀಣ್ ಕೆ.ಆರ್ ಎನ್ನುವವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಟ್ಟಣ್ಣನವರ್, ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸ್ ದಾಖಲಾಗಿದೆ.
“ಆಯೋಗದ ಅಧಿಕಾರಿ ಎಂದು ಸುಳ್ಳು ಆರೋಪ”
ಬೆಳ್ತಂಗಡಿ ಠಾಣೆಗೆ ಬಂದಿದ್ದ ಗಿರೀಶ್ ಮಟ್ಟಣ್ಣನವರ್ ಈ ಹಿಂದೆ ಮಾಧ್ಯಮಗಳ ಜೊತೆ ಮಾತಾಡುವ ವೇಳೆ ಮದನ್ ಬುಗುಡಿಯನ್ನು ಮಾನವ ಹಕ್ಕು ಆಯೋಗದ ಅಧಿಕಾರಿ ಎಂದು ಪರಿಚಯಿಸಿದ್ದರು.
“ಮಟ್ಟಣ್ಣನವರ್ ವಿರುದ್ಧ ದೂರು ಕೊಟ್ಟ ಭಕ್ತ”
ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್ ಎಂಬುವವರು ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಾಗಿದೆ. ದೂರಿನ ಆಧಾರದ ಮೇರೆಗೆ ಬೆಳ್ತಂಗಡಿ ಪೊಲೀಸರು, 204, 319(2), 353(2) ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿದ್ದಾರೆ.