ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ (Cracker Factory) ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 8 ಜನ ಬಲಿಯಾಗಿರುವ ಘಟನೆ ನಡೆದಿದೆ.
ಆಂಧ್ರಪ್ರದೇಶದ (Andhra Pradesh) ಅನಕಪಲ್ಲಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಬ್ಬರು ಮಹಿಳೆಯರು ಸೇರಿದಂತೆ 8 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, 7 ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ಘಟನೆಗೆ ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು (Chandrababu Naidu) ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಗೃಹ ಸಚಿವೆ ವಿ.ಅನಿತಾ, ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.