ಬೆಂಗಳೂರು: ಬೆಂಕಿ ಅವಘಡದಲ್ಲಿ ಐವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆ ಮಾಲೀಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಮನೆ ಮಾಲೀಕರಾದ ಬಾಲಕೃಷ್ಣಯ್ಯ ಶೆಟ್ಟಿ ಮತ್ತು ಸಂದೀಪ್ ಶೆಟ್ಟಿ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಸಹೋದರರು ಸರಿಯಾದ ಮಾರ್ಗಸೂಚಿ ಇಲ್ಲದೆ ಮನೆ ನಿರ್ಮಾಣ ಮಾಡಿದ್ದಾರೆ.
ಮನೆಗೆ ಸರಿಯಾದ ಗಾಳಿ-ಬೆಳಕು ಇರಲಿಲ್ಲ. ಸಂಬಂಧಪಟ್ಟ ಇಲಾಖೆಯಿಂದಲೂ ಅನುಮತಿ ಪಡೆಯದೆ ಕಾನೂನು ಬಾಹಿರವಾಗಿ ಮನೆ ಕಟ್ಟಲಾಗಿತ್ತು. ಅಕ್ರಮವಾಗಿ ಹಣ ಮಾಡುವ ಉದ್ಧೇಶದಿಂದ ಅಂಗಡಿಗಳು ಮತ್ತು ಗೋಡೌನ್ ಗೆ ಬಾಡಿಗೆ ನೀಡಿದ್ದಾರೆ ಎಂದು ಎಫ್ ಐಆರ್ ನಲ್ಲಿ ಉಲ್ಲೇಖಿಸಲಾಗಿದೆ.
ಈ ಕುರಿತು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.