ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಭಾರಿ ಪ್ರಮಾಣದ ನೀರು ರಿಲೀಸ್ ಮಾಡಲಾಗಿದೆ.
ಯಾದಗಿರಿಯ ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಭೀತಿ ಉಂಟಾಗಿದ್ದು, ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ ಜಲಾಶಯದಿಂದ 25 ಗೇಟ್ ಓಪನ್ ಮಾಡಿ 75 ಸಾವಿರ ಕ್ಯೂಸೆಕ್ ನೀರು ರಿಲೀಸ್ ಮಾಡಲಾಗಿದೆ. ಜಲಾಶಯಕ್ಕೆ 75,015 ಟಿಎಂಸಿ ನೀರು ಒಳಹರಿವು ಇದ್ದು, 33.33 ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 25.77 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ನದಿ ತೀರಕ್ಕೆ ಯಾರು ತೆರಳಬಾರದೆಂದು KBJNL ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.