ಚಿಕ್ಕಮಗಳೂರು: ಕರ್ತವ್ಯದಲ್ಲಿದ್ದ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿರುವ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ನೀಲಗಿರಿ ಪ್ಲಾಂಟೇಶನ್ ನಿಂದ ಫಾರೆಸ್ಟ್ ಗಾರ್ಡ್ ನಾಪತ್ತೆಯಾಗಿದ್ದಾರೆ. ಫಾರೆಸ್ಟ್ ಗಾರ್ಡ್ ಶರತ್ (33) ನಾಪತ್ತೆಯಾಗಿರುವ ವ್ಯಕ್ತಿ. ಆದರೆ, ಪ್ಲಾಂಟೇಷನ್ ನಲ್ಲಿ ರತ್ ಬಟ್ಟೆ ಮತ್ತು ಬೈಕ್ ಪತ್ತೆಯಾಗಿವೆ. ಕಳೆದ ನಾಲ್ಕು ದಿನಗಳಿಂದಲೂ ನಾಪತ್ತೆಯಾಗಿರುವ ಶರತ್ ಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಶರತ್ ಕೊಡಗು ಜಿಲ್ಲೆಯ ಕಾಲೂರು ನಿವಾಸಿ ಎನ್ನಲಾಗಿದೆ.
ಶರತ್ ಗಾಗಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಹುಟುಕಾಟ ನಡೆಸುತ್ತಿದ್ದಾರೆ. ಸಖರಾಯಪಟ್ಟಣ ನೀಲಗಿರಿ ತೋಪಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಕಡೂರು ಅರಣ್ಯ ವಿಭಾಗಕ್ಕೆ ಶರತ್ ವರ್ಗಾವಣೆಯಾಗಿದ್ದರು ಎನ್ನಲಾಗಿದೆ. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಶರತ್ ನಾಪತ್ತೆ ಹಲವಾರು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.