ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ (HD Deve Gowda) ಅವರಿಗೆ ‘ಶ್ರೀ ಗಂಗ ಸಾಮ್ರಾಟ ಶ್ರೀ ಪುರುಷ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.
ನಗರದಲ್ಲಿ (Bengaluru) ನಡೆದ ದೇವೇಗೌಡ ಅಭಿನಂದನಾ ಸಮಿತಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ದೇವೇಗೌಡ ಅವರ ಕುರಿತುದಾ ಪುಸ್ತಕವನ್ನು ಸಹ ಬಿಡುಗಡೆ ಮಾಡಲಾಯಿತು. ಆದಿಚುಂಚನಗಿರಿ ಮಠದ ಶ್ರೀ, ಸುತ್ತೂರು ಶ್ರೀಗಳು, ಮಾದಾರ ಚನ್ನಯ್ಯ ಶ್ರೀಗಳು, ನಂಜಾವಧೂತ ಶ್ರೀಗಳು ಸೇರಿದಂತೆ ಹಲವರು ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಮಾತನಾಡಿದ ದೇವೇಗೌಡ, ನಾನು ಕೊನೆಯ ಹಂತದಲ್ಲಿದ್ದೇನೆ. ಹಲವು ಸೋಲು-ಗೆಲುವುಗಳನ್ನು ಕಂಡಿದ್ದೇನೆ. ಆದರೆ ನನ್ನ ಹೆಂಡತಿ ಯಾವಾಗಲೂ ನನ್ನ ಜೊತೆ ಇದ್ದರು. ಕಷ್ಟದಲ್ಲಿ ನನ್ನ ಗೌರವ ಉಳಿಸಿದ್ದಾರೆ. ನನ್ನ ಬೆಳವಣಿಗೆಗೆ ಅವರ ಕೊಡುಗೆ ಸಾಕಷ್ಟು ಇದೆ ಎಂದು ಪತ್ನಿ ನೆನೆದು ಕಣ್ಣೀರು ಸುರಿಸಿದ್ದಾರೆ.