ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಉಂಟಾಗಿದ್ದು, ನಾಲ್ವರು ಅಭಿಮಾನಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಈ ಘಟನೆ ನಡೆದಿದೆ. ಆರ್ ಸಿಬಿ ತಂಡ ಕಪ್ ಗೆದ್ದ ಹಿನ್ನೆಲೆಯಲ್ಲಿ ಇಂದು ವಿಕ್ಟರಿ ಪರೇಡ್ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆಗಮಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಗೇಟ್ ಓಪನ್ ಮಾಡುತ್ತಿದ್ದಂತೆ ನೂಕು ನುಗ್ಗಲು ಉಂಟಾಗಿ ಸುಮಾರು 20ಕ್ಕೂ ಅಧಿಕ ಜನರು ಗಂಭೀರವಾಗಿ ಅಸ್ವಸ್ಥರಾಗಿದ್ದಾರೆ. ಈ ಪೈಕಿ ಆರು ಜನ ಸಾವನ್ನಪ್ಪಿದ್ದಾರೆ.
ಗಂಭೀರವಾಗಿ ಅಸ್ವಸ್ಥರಾದವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ವಾಹನದಲ್ಲಿ ಬಹುತೇಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ, ಘಟನೆಯಲ್ಲಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.