ರಾಜ್ಯ ಪೊಲೀಸ್ ಇಲಾಖೆ ಕ್ಯಾಪ್ ಬದಲಾವಣೆಗೆ ಚಿಂತನೆ ನಡೆಸಿರುವ ಹಿನ್ನೆಲೆಯಲ್ಲಿ ಡಿಜಿಪಿ ಕಚೇರಿಯಲ್ಲಿ ವಿವಿಧ ರಾಜ್ಯಗಳ ಪೊಲೀಸ್ ಕ್ಯಾಪ್ ಗಳನ್ನು ಗೃಹ ಸಚಿವ ಜಿ. ಪರಮೇಶ್ವರ್ ಪರಿಶೀಲನೆ ನಡೆಸಿದರು.
ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗೋವಾ ಕ್ಯಾಪ್ ಗಳ ವಿವಿಧ ಮಾದರಿಗಳನ್ನ ಪರಿಶೀಲನೆ ನಡೆಸಿದರು. ಬಳಿಕ ಪ್ರಸ್ತಾವಿತ ಕರ್ನಾಟಕ ಪೊಲೀಸ್ ಕ್ಯಾಪ್ ಮಾದರಿ ಬಗ್ಗೆ ಚರ್ಚೆ ನಡೆಸಲಾಯಿತು.