ಧಾರವಾಡ: ಹುಬ್ಬಳ್ಳಿ- ಧಾರವಾಡದಲ್ಲಿನ ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ಆಹಾರದೊಂದಿಗೆ ದರ ಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ.
ಬರೀ ಐದು ರೂಪಾಯಿಯಲ್ಲಿ ಉಪಾಹಾರ ಹಾಗೂ ಊಟ ಮಾಡಿ ಹೊಟ್ಟೆ ತುಂಬಿಸಿಕೊಳ್ಳಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಮಿನಿವಿಧಾನಸೌಧದ ಹತ್ತಿರ ಇರುವ ಇಂದಿರಾ ಕ್ಯಾಂಟೀನ್ ನಲ್ಲಿ ಹೊಸ ದರ ಪಟ್ಟಿ ಮತ್ತು ವಿವಿಧ ಆಹಾರಗಳ ಪೂರೈಕೆಗೆ ಚಾಲನೆ ನೀಡಿದ ಸಚಿವ ಸಂತೋಷ ಲಾಡ್, ಬಡವರಿಗೆ, ಕಾರ್ಮಿಕರಿಗೆ, ಹಿಂದುಳಿದವರಿಗೆ ಹಾಗೂ ಎಲ್ಲ ಸಾರ್ವಜನಿಕರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಕೇವಲ ಐದು ರೂ. ನಲ್ಲಿ ಊಟ, ಉಪಾಹಾರ ನೀಡುತ್ತಿರುವುದು ಒಂದು ಮಾದರಿಯ ಕೆಲಸವೇ ಸರಿ ಎಂದು ಹೇಳಿದ್ದಾರೆ.
ಅವಳಿ ನಗರದಲ್ಲಿ ಒಂಭತ್ತು ಇಂದಿರಾ ಕ್ಯಾಂಟೀನ್ ಗಳು ಕಾರ್ಯನಿರ್ವಹಿಸುತ್ತಿದ್ದು, ಒಂದರಲ್ಲಿ ಪ್ರತಿ ದಿನ 500 ಜನರಿಗೆ ಊಟ ಪೂರೈಸುವ ಗುತ್ತಿಗೆ ನೀಡಲಾಗಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಸಚಿವರು, ಜೋಳದ ರೊಟ್ಟಿ ಊಟ ಸವಿದರು. ಹಲವು ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.