ಬೆಂಗಳೂರು: ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ “ಗೌರಿ” ಚಿತ್ರ ಕಳೆದ ವರ್ಷ ತೆರೆ ಕಂಡು ಉತ್ತಮ ರೆಸ್ಪಾನ್ಸ್ ಕಂಡಿತ್ತು.

ಆನಂತರ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು. ಅಲ್ಲಿ ಕೂಡ ಚಿತ್ರದ ಬಗ್ಗೆ ಪ್ರಶಂಸೆ ವ್ಯಕ್ತವಾಗಿದೆ. ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯದಾಗಿನಿಂದ ಹಿಡಿದು ಈವರೆಗೂ ಎರಡುವರೆ ಲಕ್ಷ ಗಂಟೆಗಳ ಕಾಲ ಈ ಚಿತ್ರ ವೀಕ್ಷಣೆ ಕಂಡಿದೆ. ಅಧಿಕ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ.